99.The Earthquake

  1. ಭೂಮಿಯು ಭೂಕಂಪದಿಂದ ಕಂಪಿಸುವಾಗ
  2. ಮತ್ತು ಭೂಮಿಯು ತನ್ನ ಹೊರೆಯನ್ನೆಲ್ಲಾ ಹೊರ ಚೆಲ್ಲುವಾಗ
  3. ಮತ್ತು ಮಾನವನು – ಇದಕ್ಕೇನಾಗಿ ಬಿಟ್ಟಿದೆ? ಎನ್ನುವಾಗ
  4. ಅಂದು ಅದು (ಭೂಮಿಯು) ತನ್ನ ಸಮಾಚಾರಗಳನ್ನೆಲ್ಲಾ ತಿಳಿಸಿ ಬಿಡುವುದು
  5. ಏಕೆಂದರೆ, ಅದರ ಒಡೆಯನು (ಹಾಗೆ ಮಾಡಲು) ಅದಕ್ಕೆ ಆದೇಶಿಸಿರುವನು
  6. ಅಂದು ಜನರು ಗುಂಪು ಗುಂಪಾಗಿ ಹೊರ ಬರುವರು – ತಮ್ಮ ಕರ್ಮಗಳನ್ನು ಕಾಣಲಿಕ್ಕಾಗಿ
  7. ಕಿಂಚಿತ್ತಾದರೂ ಒಳಿತನ್ನು ಮಾಡಿದವನು ಅದನ್ನು ಕಾಣುವನು
  8. ಮತ್ತು ಕಿಂಚಿತ್ತಾದರೂ ಕೆಡುಕನ್ನು ಮಾಡಿದವನು ಅದನ್ನು ಕಾಣುವನು